Malgudi Express
ShareChat
click to see wallet page
@news007
news007
Malgudi Express
@news007
Malgudi Express official Page
#📜ಪ್ರಚಲಿತ ವಿದ್ಯಮಾನ📜 ಬಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಗೆ ಲಿಂಗಾಯತ ಸಮಾಜದವರನ್ನೇ ಅಧ್ಯಕ್ಷರನ್ನಾಗಿ ಮಾಡುತ್ತೇವೆ: ಬಾಲಚಂದ್ರ ಜಾರಕಿಹೊಳಿ ಬೆಳಗಾವಿ: ನಮ್ಮ ಬೆಂಬಲಿತ 13 ಅಭ್ಯರ್ಥಿಗಳನ್ನು ಬಿಡಿಸಿಸಿ ಬ್ಯಾಂಕ್ ಚುನಾವಣೆಗೆ ಕಣಕ್ಕಿಳಿಸಿದ್ದು, ದೇವರು ಮತ್ತು ಮತದಾರರ ಆಶೀರ್ವಾದದಿಂದ ಅವರನ್ನು ಗೆಲ್ಲಿಸಿಕೊಂಡು ಬಂದು ಮುಂದಿನ ಐದು ವರ್ಷಗಳ ಕಾಲ ಬ್ಯಾಂಕಿನ ಆಡಳಿತ ನಡೆಸಲು ಸಿದ್ಧರಾಗಿದ್ದೇವೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶನಿವಾರದಂದು ಇಲ್ಲಿಯ ಬ್ಯಾಂಕಿನ ಸಭಾಗೃಹದಲ್ಲಿ ತಮ್ಮ ಬೆಂಬಲಿತ 6 ಅಭ್ಯರ್ಥಿಗಳ ನಾಮಪತ್ರಗಳನ್ನು ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಮೂಡಲಗಿ, ಗೋಕಾಕ, ರಾಮದುರ್ಗ, ಹುಕ್ಕೇರಿ, ಬೆಳಗಾವಿ ಮತ್ತು ಇತರೆ ವಿಭಾಗದಿಂದ ಒಟ್ಟು 6 ಜನರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ ಎಂದರು. ಮೂಡಲಗಿ ತಾಲ್ಲೂಕಿನ ಪಿಕೆಪಿಎಸ್ ಗಳಿಂದ ನೀಲಕಂಠ ಕಪ್ಪಲಗುದ್ದಿ, ಗೋಕಾಕ ತಾಲೂಕಿನ ಪಿಕೆಪಿಎಸ್ ಗಳಿಂದ ಅಮರನಾಥ ಜಾರಕಿಹೊಳಿ, ರಾಮದುರ್ಗ ತಾಲ್ಲೂಕಿನ ಪಿಕೆಪಿಎಸ್ ಗಳಿಂದ ಶ್ರೀಕಾಂತ ಢವಣ, ಹುಕ್ಕೇರಿ ತಾಲ್ಲೂಕಿನ ಪಿಕೆಪಿಎಸ್ ಗಳಿಂದ ರಾಜೇಂದ್ರ ಪಾಟೀಲ, ಬೆಳಗಾವಿ ತಾಲ್ಲೂಕಿನ ಪಿಕೆಪಿಎಸ್ ಗಳಿಂದ ರಾಹುಲ್ ಜಾರಕಿಹೊಳಿ ಮತ್ತು ಇತರೆ ಕ್ಷೇತ್ರದಿಂದ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಅವರನ್ನು ನಮ್ಮ ಪೆನೆಲ್ ದಿಂದ ಕಣಕ್ಕಿಳಿಸಲಾಗಿದೆ ಎಂದರು. ನಾಳೆ ರವಿವಾರದಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಸೋಮವಾರದಂದು ನಾಮಪತ್ರಗಳನ್ನು ಹಿಂಪಡೆಯಲು ಕಡೆಯ ದಿನವಾಗಿದೆ. ಎಲ್ಲೆಲ್ಲಿ ನಮಗೆ ಅನುಕೂಲ ಇದೆಯೋ ಅಲ್ಲಲ್ಲಿ ಅಭ್ಯರ್ಥಿಗಳನ್ನು ಮನವೊಲಿಸಿ ಅವಿರೋಧ ಆಯ್ಕೆಗೆ ಪ್ರಯತ್ನ ಮಾಡಲಾಗುವುದು. ಒಂದು ವೇಳೆ ಅವಿರೋಧ ಆಯ್ಕೆಗೆ ಸಹಕಾರ ಸಿಗದಿದ್ದಲ್ಲಿ ಚುನಾವಣೆಯನ್ನು ಎದುರಿಸಲಾಗುವುದು. ನಮ್ಮ ಪೆನೆಲ್ ದಿಂದ ಈಗಾಗಲೇ 13 ಜನ ಸ್ಪರ್ಧೆ ಮಾಡಿದ್ದು, ಅವರನ್ನು ಆರಿಸಿ ತರುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ಎಲ್ಲಿ ಅವಿರೋಧವಾಗಿ ಆಯ್ಕೆಯಾಗುವ ಅವಕಾಶವಿರುತ್ತದೆಯೋ ಅಲ್ಲಿ ನಮ್ಮ ವಿರೋಧಿಗಳು ಯಾರನ್ನಾದರೂ ಹುಡುಕಿಕೊಂಡು ಬಂದು ಅಭ್ಯರ್ಥಿಗಳನ್ನು ನಿಲ್ಲಿಸುತ್ತಿದ್ದಾರೆ. ಅವರಿಗೆ ಅವಿರೋಧ ಆಯ್ಕೆ ಬೇಕಾಗಿಲ್ಲ. ಜತೆಗೆ ಗೆಲ್ಲುವ ಅಭ್ಯರ್ಥಿಗಳಿಗೆ ಮಣೆ ಹಾಕಿ ಆಮಿಷ ಒಡ್ಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು. ಈ ಮೊದಲೇ ಹೇಳಿದಂತೆ ಅಥಣಿ, ಕಾಗವಾಡ, ಚಿಕ್ಕೋಡಿ ತಾಲ್ಲೂಕಿನ ಕ್ಷೇತ್ರಗಳಲ್ಲಿ ನಾವು ಅಭ್ಯರ್ಥಿಗಳನ್ನು ಹಾಕುವುದಿಲ್ಲವೆಂದು ಸ್ಪಷ್ಟವಾಗಿ ಹೇಳಿದ್ದೇವೆ. ಈಗಲೂ ಅದನ್ನೇ ಹೇಳುತ್ತಿದ್ದೇವೆ. ನಿಪ್ಪಾಣಿ ಕ್ಷೇತ್ರದಿಂದ ಕಣಕ್ಕಿಳಿದಿರುವ ಉತ್ತಮ ಪಾಟೀಲ ಅವರಿಗೆ ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಡಿ‌‌. ಅಣ್ಣಾಸಾಹೇಬ ಜೊಲ್ಲೆಯವರ ಆಯ್ಕೆಗೆ ಸಹಕಾರವನ್ನು ನೀಡುವಂತೆ ಅವರಲ್ಲಿ ಸಾಕಷ್ಟು ಸಲ ವಿನಂತಿಸಿಕೊಳ್ಳಲಾಗಿತ್ತು. ಅಲ್ಲದೇ ಸಚಿವ ಸತೀಶ್ ಜಾರಕಿಹೊಳಿಯವರು ವೀರಕುಮಾರ್ ಪಾಟೀಲ ಮೂಲಕ ಸ್ಪರ್ಧೆಯನ್ನು ತಡೆಯಲಿಕ್ಕೆ ಎಲ್ಲ ಪ್ರಯತ್ನಗಳನ್ನು ಮಾಡಿದರು. ಆದರೂ ಯಾರ ಮಾತನ್ನು ಕೇಳದೇ ಉತ್ತಮ್ ಪಾಟೀಲ್ ಅವರು ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ. ನಾವು ಜೊಲ್ಲೆಯವರ ಬೆಂಬಲಕ್ಕೆ ನಿಂತು ಗೆಲ್ಲಿಸಿ ತೋರಿಸುತ್ತೇವೆ ಎಂದರು. ಇನ್ನು ಕಿತ್ತೂರು ಕ್ಷೇತ್ರದಿಂದ ವಿಕ್ರಮ ಇನಾಂದಾರ ನಮ್ಮ ಅಭ್ಯರ್ಥಿಯಾಗಿದ್ದಾರೆ. ಅಲ್ಲಿ ಸತೀಶ್ ಜಾರಕಿಹೊಳಿ ಮತ್ತು ಶಾಸಕ ಬಾಬಾಸಾಹೇಬ್ ಪಾಟೀಲ ಮಧ್ಯ ಚರ್ಚೆಗಳು ಏನು ನಡೆದಿವೆ ಎಂಬುದರ ಬಗ್ಗೆ ನಮಗೆ ಖಚಿತವಾದ ಮಾಹಿತಿಗಳಿಲ್ಲ. ಬಾಬಾಸಾಹೇಬ್ ಪಾಟೀಲ ಅವರು ತಮ್ಮ ಸಹೋದರನನ್ನು ಇನಾಂದಾರ ಅವರ ಎದುರಾಳಿಯಾಗಿ ನಿಲ್ಲಿಸಿದ್ದಾರೆ. ಕಾಗವಾಡದಿಂದ ಶ್ರೀನಿವಾಸ ಪಾಟೀಲ ಮತ್ತು ಅಥಣಿಯಿಂದ ಮಹೇಶ್ ಕುಮಠಳ್ಳಿ ಅಭ್ಯರ್ಥಿಗಳಾಗಿದ್ದರ ಬಗ್ಗೆ ನಮಗೆ ಯಾವುದೇ ಮಾಹಿತಿಗಳಿಲ್ಲ. ನಮ್ಮನ್ನು ಕೇಳದೇ ಅವರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ ಎಂದರು. ಇತರೇ ಕ್ಷೇತ್ರದಿಂದ ಸುಮಾರು 6 ಜನ ಸ್ಪರ್ಧೆಯಲ್ಲಿದ್ದರು. ಅವರಲ್ಲಿ ಮಹಾಂತೇಶ ಕವಟಗಿಮಠ, ರಾಜೇಂದ್ರ ಅಂಕಲಗಿ, ಪಂಚನಗೌಡ ದ್ಯಾಮನಗೌಡರ, ಗುರು ಮೆಟಗುಡ್ಡ ಮುಂತಾದವರ ಹೆಸರುಗಳು ಚಾಲನೆಯಲ್ಲಿದ್ದವು. ಆದರೆ, ಕೊನೆಗೆ ಚನ್ನರಾಜ ಅವರ ಹೆಸರನ್ನು ಅಂತಿಮ ಮಾಡಲಾಯಿತು ಎಂದರು. ಇದಕ್ಕೂ ಮೊದಲು ಚನ್ನರಾಜ ಅವರು ಬೆಳಗಾವಿ-ಖಾನಾಪೂರ- ಕಿತ್ತೂರು ಕ್ಷೇತ್ರದ ಪಿಕೆಪಿಎಸ್ ದಿಂದ ಸ್ಪರ್ಧೆ ಮಾಡುವ ಪ್ರಯತ್ನದಲ್ಲಿದ್ದರು. ಸತೀಶ್ ಜಾರಕಿಹೊಳಿಯವರ ಕೋರಿಕೆ ಮೇರೆಗೆ ಅವರು ಸ್ಪರ್ಧೆಯಿಂದ ಹಿಂದಕ್ಕೆ ಸರಿದರು. ಆದರೆ, ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಾವು, ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ ಅವರು ಚರ್ಚೆ ನಡೆಸಿ ಕೊನೆಗೆ ಚನ್ನರಾಜ ಹಟ್ಟಿಹೊಳಿ ಅವರನ್ನು ಇತರೇ ಕ್ಷೇತ್ರದಿಂದ ಕಣಕ್ಕಿಳಿಸುವ ನಿರ್ಧಾರವನ್ನು ತೆಗೆದುಕೊಂಡೆವು ಎಂದರು. ಅನುಭವಿಗಳು ಸಹಕಾರ ಕ್ಷೇತ್ರವನ್ನು ಪ್ರವೇಶ ಮಾಡಬೇಕು. ಒಳ್ಳೆಯವರು ಬರುವುದರಿಂದ ಬ್ಯಾಂಕ್ ಚೆನ್ನಾಗಿ ನಡೆಯುತ್ತದೆ. ಬ್ಯಾಂಕಿನ ಆರ್ಥಿಕ ಸ್ಥಿತಿಯನ್ನು ಇನ್ನಷ್ಟು ಹೆಚ್ಚಿಸುವ ಮೂಲಕ ಹೊಸಬರಿಗೆ ಅನುಕೂಲ ಮಾಡಿಕೊಡುತ್ತಿದ್ದೇವೆ ಎಂದರು. ಜಾರಕಿಹೊಳಿಯವರ ಕುಟುಂಬದಿಂದ ಈ ಬಾರಿ ಇಬ್ಬರು ಸ್ಪರ್ಧೆ ಮಾಡುತ್ತಿದ್ದು, ಇದು ಕುಟುಂಬ ರಾಜಕೀಯ ಅಲ್ಲವೇ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಇಡೀ ಜಿಲ್ಲೆ, ರಾಜ್ಯ ಹಾಗೂ ದೇಶದ ಇತಿಹಾಸವನ್ನು ನೋಡಿದರೆ ಎಲ್ಲರೂ ತಮ್ಮ ಮಕ್ಕಳನ್ನು ರಾಜಕೀಯಕ್ಕೆ ತಂದಿದ್ದಾರೆ. ಇದರಲ್ಲಿ ಅಚ್ಚರಿಯೂ ಏನಿಲ್ಲ. ಬೆಳಗಾವಿಯಿಂದ ರಾಹುಲ್ ಅವರನ್ನು ನಿಲ್ಲಿಸಲು 6 ತಿಂಗಳಿನ ಹಿಂದೆಯೇ ಚರ್ಚೆ ನಡೆದಿತ್ತು. ‌ಗೋಕಾಕದಲ್ಲಿ ಅಮರನಾಥ ಅವರನ್ನು ನಿಲ್ಲಿಸಲು ಆ ತಾಲ್ಲೂಕಿನ ಪಿಕೆಪಿಎಸ್ ಸಂಘಗಳು ಉತ್ಸುಕರಾಗಿದ್ದವು. ಅನಿವಾರ್ಯ ಸ್ಥಿತಿಯಲ್ಲಿ ಅಮರನಾಥ ಅವರನ್ನು ಕಣಕ್ಕಿಳಿಸಲಾಗಿದೆ ಎಂದರು. ಈ ಬ್ಯಾಂಕಿನ ಚುನಾವಣೆಯಲ್ಲಿ ನಾನು ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದ್ದೆ. ಈಗಲೂ ಅದೇ ನಿಲುವಿಗೆ ಬದ್ಧನಿರುವೆ. ಆದರೆ, ನಮ್ಮ ಕುಟುಂಬವರು ನಿಲ್ಲುವುದಿಲ್ಲವೆಂದು ಎಲ್ಲಿಯೂ ಹೇಳಿಲ್ಲ ಎಂದರು. ನಮ್ಮನ್ನು ನಂಬಿಕೊಂಡು ಬದುಕುತ್ತಿರುವ ಜನರನ್ನು ಕೈ ಬಿಡಬಾರದು. ನಮ್ಮ ಜನಸೇವೆಯನ್ನು ಮುಂದುವರೆಸಿಕೊಂಡು ಹೋಗಲು ನಮ್ಮ ಮಕ್ಕಳು ಜನಸೇವೆಗೆ ಬರುತ್ತಿದ್ದಾರೆ. ನಮ್ಮ ಎರಡನೇ ಪೀಳಿಗೆ ಬೆಳೆಯಬೇಕು. ಹೀಗಾಗಿ ನಮ್ಮ ರಥ ಮುಂದಕ್ಕೆ ಸಾಗಬೇಕು. ಜನರ ಆಶೀರ್ವಾದ ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯತನಕ ನಮ್ಮ ಸೇವೆ ಜನರ ಮಧ್ಯೆ ಇರುತ್ತದೆ. ನಿರಂತರವಾಗಿ ಜನಸೇವೆಯನ್ನು ಮಾಡುತ್ತೇವೆ. ಇಂದು, ನಾಳೆ, ಎಂದೆಂದಿಗೂ ಜನರಿಗಾಗಿ ನಮ್ಮ ಸೇವೆ ಮುಡಿಪಾಗಿದೆ ಎಂದರು. ನಮ್ಮ ಮಕ್ಕಳು ಬಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಗೆ ಬಂದರೂ ಲಿಂಗಾಯತ ಸಮಾಜದವರನ್ನೇ ಅಧ್ಯಕ್ಷರನ್ನಾಗಿ ಮಾಡುತ್ತೇವೆ. ಮುರಗೋಡ ಮಹಾಂತ್ ಅಜ್ಜನವರ ಆಶೀರ್ವಾದದಿಂದ ಬೆಳೆದಿರುವ ಈ ಬ್ಯಾಂಕಿನ ಪ್ರಗತಿಯಲ್ಲಿ ಲಿಂಗಾಯತ ಸಮಾಜದ ಪಾತ್ರ ಅಮೂಲ್ಯವಾಗಿದೆ ಎಂದರು. ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದ್ದ ಶನಿವಾರ ಸಾವಿರಾರು ಸಂಖ್ಯೆಯಲ್ಲಿ ಜಾರಕಿಹೊಳಿ ಸಹೋದರರ ಬೆಂಬಲಿಗರು ಬ್ಯಾಂಕಿನ ಆವರಣದಲ್ಲಿ ಜಮಾಯಿಸಿದ್ದರು. ಜಾರಕಿಹೊಳಿ ಸಹೋದರರ ಪೊಸ್ಟರ್ ಗಳು ರಾರಾಜಿಸಿದವು. ಸರ್ಕೀಟ್ ಹೌಸ್ ದಿಂದ ಬ್ಯಾಂಕಿನವರೆಗೆ ಅಭ್ಯರ್ಥಿಗಳು ಪಾದಯಾತ್ರೆ ಮೂಲಕ ಬಂದು ನಾಮಪತ್ರಗಳನ್ನು ಸಲ್ಲಿಸಿದರು. ಮಾಜಿ ಸಂಸದ ಅಣ್ಣಾ ಸಾಹೇಬ ಜೊಲ್ಲೆ, ಶಾಸಕ ವಿಶ್ವಾಸ ವೈದ್ಯ, ವಿಪ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಹಾಂತೇಶ ದೊಡ್ಡಗೌಡ್ರ, ಅರವಿಂದ ಪಾಟೀಲ, ಅಪ್ಪಾಸಾಹೇಬ ಕುಲಗೋಡೆ, ಅಮರನಾಥ ಜಾರಕಿಹೊಳಿ, ರಾಹುಲ್ ಜಾರಕಿಹೊಳಿ, ನೀಲಕಂಠ ಕಪ್ಪಲಗುದ್ದಿ, ವಿಕ್ರಮ ಇನಾಂದಾರ, ವಿರುಪಾಕ್ಷ ಮಾಮನಿ, ಶ್ರೀಕಾಂತ ಢವಣ, ರಾಜೇಂದ್ರ ಪಾಟೀಲ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು. #make #Lingayat #member #chairman #BDCC #Bank #board #directors #BalachandraJarkiholi #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ದಾವಣಗೆರೆಯಲ್ಲಿ ಕೋಳಿ ಸಾಕಾಣಿಕೆ ತರಬೇತಿ ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಅಕ್ಟೋಬರ್ 13 ಮತ್ತು 14ರಂದು ಕೋಳಿ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತರಿಗೆ ಮಾತ್ರ ಸೀಮಿತವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು. #Poultry #farming #training #Davangere #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಗಿರೀಶ್ ಮಟ್ಟಣ್ಣವರ್ ಬಾಂಬ್ ಇಟ್ಟಿದ್ದ ಪ್ರಕರಣವನ್ನು ಮತ್ತೆ ತನಿಖೆಗೆ ಒಳಪಡಿಸಿ: ಪ್ರಶಾಂತ್ ಸಂಬರಗಿ ಬೆಂಗಳೂರು: ಸಾಮಾಜಿಕ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ಕೆಲವು ವರ್ಷಗಳ ಹಿಂದೆ ಶಾಸಕರ ಭವನದ ಬಳಿ ಬಾಂಬ್ ಇಟ್ಟಿದ್ದ ಆರೋಪ ನ್ಯಾಯಾಲಯದಲ್ಲಿ ಖುಲಾಸೆಯಾಗಿದ್ದು, ಪ್ರಕರಣವನ್ನು ಮತ್ತೆ ತನಿಖೆಗೆ ಒಳಪಡಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಹಾಗೂ ಗೃಹ ಕಾರ್ಯದರ್ಶಿಗೆ ದೂರು ಸಲ್ಲಿಸಿದ್ದಾರೆ. ಶಾಸಕರ ಭವನದ ಬಳಿ ಬಾಂಬ್ ಇಟ್ಟಿದ್ದ ಕೇಸ್ (ಕ್ರೈಂ ನಂ. 243/2005) ಅನ್ನು ಪುನರ್‌ತೆರೆದು ತನಿಖೆ ನಡೆಸಬೇಕು. ಜತೆಗೆ, ಎನ್‌ಐಎ ತನಿಖೆಗೆ ಒಳಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ತಾವೇ ಬಾಂಬ್ ತಯಾರಿಸಿ ಇಟ್ಟಿರುವುದಾಗಿ ಒಪ್ಪಿಕೊಂಡಿರುವ ರೀತಿಯಲ್ಲಿ ಗಿರೀಶ್ ಮಟ್ಟಣ್ಣವರ್ ಹಲವಾರು ವಿಡಿಯೋಗಳಲ್ಲಿ ಹೇಳಿಕೆಗಳನ್ನು ನೀಡಿದ್ದಾರೆ. ತಾವೇ ಬಾಂಬ್ ತಯಾರಿಸಿ ಇಟ್ಟಿರುವುದಾಗಿ ಒಪ್ಪಿಕೊಂಡು ಹೇಳಿಕೆ ನೀಡಿರುವುದು ಸ್ಪಷ್ಟವಾಗಿದೆ. ಹೀಗಾಗಿ, ಕೇಸ್ ಈಗಾಗಲೇ ಕೋರ್ಟ್‌ನಲ್ಲಿ ಖುಲಾಸೆಯಾಗಿದ್ದರೂ, ಹೊಸ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಪುನಃ ತನಿಖೆ ನಡೆಸುವ ಅಗತ್ಯವಿದೆ ಎಂದು ಪ್ರಶಾಂತ್ ಸಂಬರಗಿ ದೂರಿನಲ್ಲಿ ಹೇಳಿದ್ದಾರೆ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಕೇಸ್ ತನಿಖೆ ವೇಳೆ, ದಾಳಿಕೋರರ ಗುರಿ ಧರ್ಮಸ್ಥಳ ಆಗಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ. ಸದ್ಯ ಗಿರೀಶ್ ಮಟ್ಟಣ್ಣವರ್ ಕೂಡ ಧರ್ಮಸ್ಥಳ ವಿರುದ್ಧದ ಷಡ್ಯಂತ್ರದಲ್ಲಿ ಸಕ್ರಿಯವಾಗಿದ್ದಾರೆ. ಹೀಗಾಗಿ ಈ ಎರಡು ಪ್ರಕರಣಗಳ ನಡುವೆ ಲಿಂಕ್ ಇದೆಯೇ ಎಂಬುದನ್ನು ತನಿಖೆ ನಡೆಸಬೇಕಿದೆ ಎಂದು ಪ್ರಶಾಂತ್ ಸಂಬರಗಿ ಉಲ್ಲೇಖಿಸಿದ್ದಾರೆ. ಗಿರೀಶ್ ಮಟ್ಟಣ್ಣವರ್ ಅವರನ್ನು ಎನ್‌ಐಎ ತನಿಖೆಗೆ ಒಳಪಡಿಸಬೇಕು. ಶಾಸಕರ ಭವನದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣವನ್ನೂ ಮರು ತನಿಖೆ ಮಾಡಬೇಕು. ಜಿಲೆಟಿನ್ ಹಾಗೂ ಇತರ ಸ್ಪೋಟಕ ವಸ್ತುಗಳಿಂದ ಬಾಂಬ್ ತಯಾರು ಮಾಡುವುದು ಸುಲಭ ಎಂದು ಅವರೇ ಹೇಳಿಕೊಂಡಿದ್ದಾರೆ ಎಂದು ಸಂಬರಗಿ ದೂರಿನಲ್ಲಿ ಹೇಳಿದ್ದಾರೆ. ಪ್ರಶಾಂತ್ ಸಂಬರಗಿ ಅವರು ಹದಿನೈದು ವಿಡಿಯೋಗಳ ಜೊತೆಗೆ ಈ ಸಂಬಂಧ ದಾಖಲೆಗಳನ್ನು ಪೊಲೀಸ್ ಆಯುಕ್ತರಿಗೆ ಹಾಗೂ ಗೃಹ ಇಲಾಖೆ ಕಾರ್ಯದರ್ಶಿಗೆ ಸಲ್ಲಿಸಿದ್ದು, ಪ್ರಕರಣದ ಮರು ತನಿಖೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. #GirishMattannavar #bomb #case should #reinvestigated #PrashantSambaragi #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ: ಕೃಷ್ಣ ಬೈರೇಗೌಡ "ಜೀರೋ ಟಾಲರೆನ್ಸ್" ಹಾಸನಾಂಬ ದೇವಾಲಯದ ಆವರಣಕ್ಕೆ ಅನಧಿಕೃತ ಜನರಿಗೆ ಪ್ರವೇಶ ನೀಡಲು ತಮ್ಮ ಅಧಿಕೃತ ಗುರುತಿನ ಚೀಟಿಯನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಮೊದಲ ದಿನವೇ ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇದು ನಮ್ಮ ನಿರ್ದೇಶನಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಸರ್ಕಾರಿ ಗುರುತಿನ ಚೀಟಿಯನ್ನು ದುರುಪಯೋಗಪಡಿಸಿಕೊಳ್ಳುವುದು ಗಂಭೀರ ಅಪರಾಧ. ಈ ಇಬ್ಬರು ಅಧಿಕಾರಿಗಳು ತಮ್ಮ ಅಧಿಕೃತ ಗುರುತಿನ ಚೀಟಿಯನ್ನು ಅನಧಿಕೃತ ಜನರಿಗೆ ನೀಡಿ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಿದ್ದರು. ಇಂತಹ ಕೃತ್ಯಗಳು ಸರ್ಕಾರಿ ನೌಕರರಿಗೆ ತಕ್ಕುದಾದದ್ದಲ್ಲ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಇದು ಕೇವಲ ಒಂದು ಪ್ರತ್ಯೇಕ ಘಟನೆ. ಈ ಘಟನೆ ಹೊರತುಪಡಿಸಿ ಎಲ್ಲಾ ಸರ್ಕಾರಿ ನೌಕರರು ಸಾರ್ವಜನಿಕರಿಗೆ ಅತ್ಯುತ್ತಮ ದರ್ಶನ ವ್ಯವಸ್ಥೆಯನ್ನು ಖಾತ್ರಿಪಡಿಸುವಲ್ಲಿ ಅನುಕರಣೀಯ ಕೆಲಸ ಮಾಡಿದ್ದಾರೆ. ಇದು ಉತ್ತಮ ತಂಡದ ಕೆಲಸ. ಉತ್ತಮ ಕೆಲಸ ಮಾಡುತ್ತಿರುವ ಸರ್ಕಾರಿ ಅಧಿಕಾರಿಗಳಿಗೆ ಶ್ರೇಯಸ್ಸು ಸಲ್ಲಬೇಕು. - ಕೃಷ್ಣ ಬೈರೇಗೌಡ, ಕಂದಾಯ ಸಚಿವ #Two #govt #officials #suspended #KrishnaBairegowda #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ದೈಹಿಕ ಆರೋಗ್ಯದಷ್ಟೆ ಮಾನಸಿಕ ಆರೋಗ್ಯ ಬಹಳ ಅವಶ್ಯಕ: ಶೈಲ ಬಿ.ಎಂ ಹಾಸನ: ದೈಹಿಕ ಆರೋಗ್ಯದಷ್ಟೆ ಮಾನಸಿಕ ಆರೋಗ್ಯ ಬಹಳ ಅವಶ್ಯಕವಾಗಿದ್ದು, ನಿಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚು ಗಮನವಹಿಸಬೇಕು ಎಂದು 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಮಾನಸಿಕ ಆರೋಗ್ಯ ವಿಮರ್ಶನಾ ಮಂಡಳಿಯ ಅಧ್ಯಕ್ಷ ಶೈಲ ಬಿ.ಎಂ ತಿಳಿಸಿದ್ದಾರೆ. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಹಾಸನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಹಾಸನ ಮತ್ತು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಹಾಗೂ ಜಿಲ್ಲಾ ಕಾನೂನುಗಳ ಸೇವಾ ಪ್ರಾಧಿಕಾರ, ಹಾಸನ, ಮನೋವೈದ್ಯಕೀಯ ವಿಭಾಗ, ಹಿಮ್ಸ್, ಹಾಸನ ಜಿಲ್ಲಾ ಮಾನಸಿಕ ಆರೋಗ್ಯ ವಿಮರ್ಶನಾ ಮಂಡಳಿ ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು ಹಾಸನ ವೈದೈಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ಅವರು ಮಾತನಾಡಿದರು. ದೇಹದ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ದಿನನಿತ್ಯ ಯೋಗ, ಪ್ರಾಣಯಾಮ, ಧ್ಯಾನವನ್ನು ಮಾಡಬೇಕು ಎಂದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳಾದ ದಾಕ್ಷಾಯಿಣಿ ಮಾತನಾಡಿ, ಮಾನಸಿಕ ಅಸ್ವಸ್ಥರಿಗೆ ಆರೈಕೆದಾರರು ಯಾರೂ ಇಲ್ಲದಂತಹ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಾಮನಿರ್ದೇಶಿತ ಆರೈಕೆದಾರರು ಸದರಿ ಅಸ್ವಸ್ಥರನ್ನು ಆರೈಕೆ ಮಾಡಬೇಕಾಗಿರುತ್ತದೆ ಎಂದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ನಾಗೇಶ್ ಪಿ.ಆರಾಧ್ಯ ಅವರು ಮಾತನಾಡಿ ಮಾನಸಿಕ ಖಾಯಿಲೆಗಳು ಯಾರಿಗೆ ಬೇಕಾದರು ಬರಬಹುದು, ಬಂದಂತಹ ಸಂದರ್ಭದಲ್ಲಿ ತಮ್ಮ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಮಾತನಾಡಬೇಕು ಅಥವಾ ಉಚಿತ ಮಾನಸಿಕ ಆರೋಗ್ಯ ಸಹಾಯವಾಣಿ ಟೆಲಿಮನಸ್ 14416ಕ್ಕೆ ಕರೆಮಾಡಿ ಮಾತನಾಡಬಹುದು ಎಂದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾಗಪ್ಪ ಜಿ.ಎಸ್ ಮಾತನಾಡಿ ನೈಸರ್ಗಿಕ ವಿಕೋಪಗಳು ಹಾಗೂ ತುರ್ತು ಪರಿಸ್ಥಿತಿಗಳ ಸಂದರ್ಭಗಳಲ್ಲಿ ತೊಂದರೆಗೊಳಗಾದವರಿಗೆ ಮಾನಸಿಕ ಬೆಂಬಲ ಅತ್ಯವಶ್ಯಕವಾಗಿರುತ್ತದೆ ಎಂದರು. ಹಿಮ್ಸ್ ಪ್ರಾಂಶುಪಾಲ ಡಾ.ರವಿಕುಮಾರ್ ಬಿ.ಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಇದರಲ್ಲಿ ಕೇವಲ ಶೇ.30ರಷ್ಟು ಜನ ಚಿಕಿತ್ಸೆಯನ್ನು ಪಡೆಯುತ್ತಿದ್ದು ಉಳಿದವರು ಇದನ್ನು ಕಡೆಗಣಿಸುತ್ತಿದ್ದಾರೆ. ಹಾಗಾಗಿ ಜನರಿಗೆ ಇದರ ಬಗ್ಗೆ ಸಾಕಷ್ಟು ಅರಿವು ಮೂಡಿಸುವ ಅವಶ್ಯಕತೆ ಇದೆ ಎಂದರು. ಹಾಸನ ಮನೋವೈದ್ಯಕೀಯ ವಿಭಾಗದ ಮನೋರೋಗ್ಯ ತಜ್ಞ ಡಾ.ಸಂತೋಷ್ ಮಾತನಾಡಿ, ಆಗಮಿಸಿ ಸಾರ್ವಜನಿಕರು ಕೇವಲ ದೈಹಿಕ ಖಾಯಿಲೆಗಳ ಬಗ್ಗೆ ಗಮನ ನೀಡುತ್ತಾರೆ. ಅವರ ಮನಸ್ಸಿಗೆ ಸಂಬಂಧಿಸಿದ ಸಾಮಾನ್ಯ ಮಾನಸಿಕ ಖಾಯಿಲೆಗಳಾದ ಖಿನ್ನತೆ, ಆತಂಕ, ಗೀಳು ಖಾಯಿಲೆಗಳು ಇವುಗಳ ಬಗ್ಗೆ ಗಮನ ನೀಡುವುದಿಲ್ಲ. ತದನಂತರದಲ್ಲಿ ಇದು ಉಲ್ಬಣಗೊಂಡು ತೀವ್ರತರಹದ ಮಾನಸಿಕ ಖಾಯಿಲೆಗಳಾದ ಸ್ಕೀಜೋಫ್ರೇನಿಯಾ, ಅತಿಯಾದ ಸಂತೋಷ, ಅತಿಯಾದ ಸಂಶಯ, ವಿಚಿತ್ರವಾಗಿ ವರ್ತಿಸುವುದು ಹಾಗೂ ಉನ್ಮಾದಕ್ಕೆ (ಮೇನಿಯಾ) ಒಳಗಾಗುತ್ತಾರೆ, ಈ ಎಲ್ಲಾ ಖಾಯಿಲೆಗಳಿಗೂ ಉಚಿತ ಚಿಕಿತ್ಸೆ ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಮಾನಸಿಕ ಆರೊಗ್ಯ ವಿಮರ್ಶನಾ ಮಂಡಳಿ ಕಚೇರಿ ಉದ್ಘಾಟನೆ: ಇದೇ ವೇಳೆ ಹಿಮ್ಸ್ ಬೋಧಕ ಆಸ್ಪತ್ರೆಯ ಮನೋವೈದ್ಯಕೀಯ ವಿಭಾಗದಲ್ಲಿ ನೂತನವಾಗಿ ಆರಂಭಗೊಂಡಿರುವ ಮಾನಸಿಕ ಆರೊಗ್ಯ ವಿಮರ್ಶನಾ ಮಂಡಳಿಯ ಕಚೇರಿಯನ್ನು 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಮಾನಸಿಕ ಆರೋಗ್ಯ ವಿಮರ್ಶನಾ ಮಂಡಳಿಯ ಅಧ್ಯಕ್ಷರಾದ ಶೈಲ ಬಿ.ಎಂ ಅವರು ಉದ್ಘಾಟಿಸಿದರು. #Mentalhealth #important #physicalhealth #ShailaBM #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಕರ್ನಾಟಕ ಲೇಖಕಿಯರ ಸಂಘದ ಗೊಂದಲ ಇತ್ಯರ್ಥ: ಡಾ.ಎಚ್.ಎಲ್.ಪುಷ್ಪ ಅಕ್ಟೋಬರ್, 11 ಶನಿವಾರದಂದು ನಡೆದ 'ಕರ್ನಾಟಕ ಲೇಖಕಿಯರ ಸಂಘ'ದ ಸರ್ವ ಸದಸ್ಯರ ಸಭೆಯು ಸೆಪ್ಟೆಂಬರ್ 7 ರಂದು ನಡೆದ ಸಭೆಯ ಮುಂದುವರಿಕೆಯಾಗಿರುತ್ತದೆ. ಹಿಂದೆ ಮಂಡಿಸಿದ ಲೆಕ್ಕ ಪರಿಶೋಧನಾ ವರದಿ 2024-25 ಕನ್ನಡದಲ್ಲಿ ಇಲ್ಲವೆಂದು ಮತ್ತು ಅದಕ್ಕೆ ಸಂಬಂಧಿಸಿದ ಕೆಲವು ಪ್ರಶ್ನೆಗಳಿಗೆ ಉತ್ತರಿಸಲು ಈ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ ಹಲವಾರು ವಿಷಯಗಳ ಬಗ್ಗೆ ಹಾಗೂ ಲೇಖಕಿಯರ ಸಮ್ಮೇಳನದ ಖರ್ಚು ವೆಚ್ಚದ ಬಗ್ಗೆ ಸುಧೀರ್ಘವಾಗಿ ಚರ್ಚಿಸಲಾಗಿತ್ತು. ಲೆಕ್ಕಾಚಾರದಲ್ಲಿ ಗೊಂದಲ ಇತ್ತೆ ವಿನಃ ಯಾವುದೇ ಹಣದ ದುರುಪಯೋಗ ನಡೆದಿರಲಿಲ್ಲ. ಆದರೆ, ಲೆಕ್ಕಪತ್ರ ನಿರ್ವಹಣೆ ಮತ್ತು ಲೆಕ್ಕಪರಿಶೋಧನಾ ಪ್ರಸ್ತುತಿಯಲ್ಲಿ ವ್ಯತ್ಯಾಸವಿದೆ ಎಂಬ ಆಕ್ಷೇಪಗಳಿದ್ದರೂ ಕೆಲವು ತಿದ್ದುಪಡಿಗಳನ್ನು ಸೂಚಿಸಿ ಬಹುಮತದಿಂದ ಲೆಕ್ಕಪತ್ರವನ್ನು ಸಭೆಯಲ್ಲಿ ಅಂಗಿಕರಿಸಿ ಅನುಮೋದಿಸಲಾಯಿತು. ಶನಿವಾರ ನಡೆದ ಸಂಘಕ್ಕೆ ಸಂಬಂಧಿಸಿದ ಸರ್ವಸದಸ್ಯರ ಸಭೆಯಲ್ಲಿ ಎಲ್ಲಾ ಭಿನ್ನಾಭಿಪ್ರಾಯಗಳನ್ನು ಪರಸ್ಪರ ಚರ್ಚೆಯ ಮೂಲಕ ಬಗೆಹರಿಸಲಾಗಿದೆ. ಈಗ ಲೇಖಕಿಯರ ಸಂಘದಲ್ಲಿ ಯಾವುದೇ ಸಮಸ್ಯೆ ಇಲ್ಲ. ಸದಸ್ಯರಲ್ಲದವರು ಮತ್ತು ಇತರೆ ಸಂಘಟನೆಗಳ ಅಧ್ಯಕ್ಷರು ಸಂಘದ ಕಾರ್ಯಚಟುವಟಿಕೆಯಲ್ಲಿ ಮೂಗು ತೂರಿಸುವ ಅಗತ್ಯವಿಲ್ಲ ಎಂದು ಸರ್ವ ಸದಸ್ಯರು ಈ ಮೂಲಕ ಆಗ್ರಹಿಸಿದ್ದಾರೆ. ಇದೇ ಸಂದರ್ಭದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ಮುಂದಿನ ಚುನಾವಣೆಯನ್ನು ಆಯೋಜಿಸಬೇಕೆಂದು ತೀರ್ಮಾನಿಸಲಾಯಿತು. ಚುನಾವಣೆಯ ಅಧಿಕಾರಿಯಾಗಿ ಸಾಮಾಜಿಕ ಕಾರ್ಯಕರ್ತೆ ಹಾಗೂ ವಕೀಲರಾದ ಪ್ರತಿಭ. ಆರ್ ಅವರನ್ನು ನೇಮಿಸಲಾಯಿತು. ಇಂದಿನ ಸಭೆಯಲ್ಲಿ ಸಂಘದ ಮಾಜಿ ಅಧ್ಯಕ್ಷರು, ಹೊಸದಾಗಿ ನೇಮಕವಾದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ, ಸಲಹಾ ಸಮಿತಿ ಹಾಗೂ ಹಿಂದೆ ರಾಜಿನಾಮೆ ನೀಡಿದ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದು, ಸಭೆ ಸಾಂಗೋಪವಾಗಿ ನಡೆಯಲು ಸಹಕರಿಸಿದ್ದು ನನಗೆ ಸಮಾಧಾನ ಸಂತೋಷ ತಂದಿದೆ. ಲೇಖಕಿಯರ ಸಂಘದಲ್ಲಿ ಒಗ್ಗಟ್ಟು ಇದ್ದು, ಮೊದಲಿನಂತೆ ಚಟುವಟಿಕೆಗಳು ನಡೆಯುತ್ತವೆ ಎಂದು ತಿಳಿಸಲು ಸಂತೋಷವಾಗುತ್ತದೆ. ವಂದನೆಗಳೊಂದಿಗೆ ತಮ್ಮ ವಿಶ್ವಾಸಿ, - ಡಾ. ಎಚ್.ಎಲ್. ಪುಷ್ಪ, ಅಧ್ಯಕ್ಷರು, ಕರ್ನಾಟಕ ಲೇಖಕಿಯರ ಸಂಘ, 94800 51222 #Karnataka #Women #Writers #Association #confusion #resolved #HLPushpa #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಕನ್ನಡಪರ ವಿಶಿಷ್ಟ ವಿದ್ಯಮಾನಕ್ಕೆ ಸಾಕ್ಷಿಯಾದ ಜಾಮಿಯಾ ಮಸೀದಿ ಮದ್ರಸಾಗಳಲ್ಲಿ ಕನ್ನಡ ಕಲಿಸುವ ನಿಟ್ಟಿನಲ್ಲಿ ತಾವೇ ಮುಂದೆ ನಿಂತು ವ್ಯವಸ್ಥೆ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದ ಮೌಲಾನ ಡಾ.ಇಮ್ರಾನ್ ಮಸೂದ್ ಬೆಂಗಳೂರು: ಬೆಂಗಳೂರಿನ ಹೃದಯ ಭಾಗದಲ್ಲಿರುವ ಜಾಮಿಯಾ ಮಸೀದಿ ಇಂದು ವಿಶಿಷ್ಟವಾದ ವಿದ್ಯಮಾನಕ್ಕೆ ಸಾಕ್ಷಿಯಾಯಿತು. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎಂ ನಾರಾಯಣಗೌಡ ಇಂದು ಸುಧಾರಣಾ ಪರ ಧರ್ಮಗುರು ಮೌಲಾನ ಡಾ.ಇಮ್ರಾನ್ ಮಸೂದ್ ಅವರನ್ನು ಜಾಮಿಯಾ ಮಸೀದಿಯಲ್ಲಿ ಭೇಟಿ ಮಾಡಿ, ಕನ್ನಡಪರ ವಾತಾವರಣ ನಿರ್ಮಿಸುವ ಬಗ್ಗೆ ಸುದೀರ್ಘ ಸಮಾಲೋಚನೆ ಮಾಡಿದರು. ಮಸೀದಿಗಳ ಪ್ರವಚನಗಳಲ್ಲಿ ಕನ್ನಡದ ಬಳಕೆ ಆಗಬೇಕು. ಈ ಬಳಕೆಯ ಮೂಲಕ ಭಾಷೆ ಅಷ್ಟೇ ಅಲ್ಲ ಬದುಕು ಬೆಳಗುತ್ತದೆ. ಹಾಗೆ ಧರ್ಮದ ಸಂದೇಶಗಳು ಹೆಚ್ಚು ಅರ್ಥ ಪಡೆಯುತ್ತವೆ. ಧರ್ಮವನ್ನು, ಉಪದೇಶಗಳನ್ನು, ಪ್ರವಚನಗಳನ್ನು ಹೆಚ್ಚು ಜನ ಅರ್ಥ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ಮುಸ್ಲಿಂ ಸಮುದಾಯ ಮುಖ್ಯ ವಾಹಿನಿಗೆ ಬರುವ ಅಗತ್ಯವಿದೆ ಎಂದು ಟಿ.ಎ.ನಾರಾಯಣಗೌಡ ಮನವಿ ಮಾಡಿದರು. ಇಲ್ಲಿ ಒತ್ತಾಯ, ಆಗ್ರಹದ ಪ್ರಶ್ನೆ ಇಲ್ಲ. ಹಂತಹಂತವಾಗಿ ನಿಧಾನವಾಗಿ ಕನ್ನಡ ಬಳಕೆ ಆರಂಭವಾಗಲಿ ಎಂದು ಧರ್ಮಗುರು ಇಮ್ರಾನ್ ಮಸೂದ್ ಅವರಿಗೆ ಮನವಿ ಮಾಡಿದರು. ಅತ್ಯಂತ ಸೌಹಾರ್ದಯುತ, ಆಶಾದಾಯಕ ವಾತಾವರಣದಲ್ಲಿ ನಡೆದ ಸಭೆಯಲ್ಲಿ ನಾರಾಯಣ ಗೌಡ ಅವರು ಕನ್ನಡ ಸುಪ್ರಸಿದ್ಧ ಬರಹಗಾರರಾದ ಡಾ.ಎಸ್ಕೆ ಕರೀಂ ಖಾನ್, ನಿಸಾರ್ ಅಹಮದ್, ಏಜಾಸುದ್ದೀನ್, ರಮಜಾನ್ ದರ್ಗಾ, ಕನ್ನಡದ ಕಟ್ಟಾಳು ರೆಹಮಾನ್ ಖಾನ್, ಕರ್ನಾಟಕ ಏಕೀಕರಣದ ಹುತಾತ್ಮ ರಂಜಾನ್ ಖಾನ್ ಎಲ್ಲರನ್ನು ಸ್ಮರಿಸಿ, ಈ ನಾಡು ಕಟ್ಟುವಲ್ಲಿ, ಭಾಷೆ ಬೆಳಗುವಲ್ಲಿ ಅಲ್ಪಸಂಖ್ಯಾತರ ಕೊಡುಗೆ ದೊಡ್ದದು ಎಂದು ಬಣ್ಣಿಸಿದರು. ನಾರಾಯಣಗೌಡರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಧರ್ಮಗುರು ಮೌಲಾನಾ ಇಮ್ರಾನ್ ಮಸೂದ್ ಎಲ್ಲ ಹಂತದಲ್ಲಿ ಕನ್ನಡ ಜಾರಿಗೆ ತಾವೂ ಬದ್ಧ ಎಂದು ಘೋಷಿಸಿದರು. ಸರಕಾರ ಆನ್ ಲೈನ್ ಕನ್ನಡ ಕಲಿಕೆ ಜಾರಿಗೆ ತರಲಿ. ಆಫ್ ಲೈನ್ ಕನ್ನಡ ಕಲಿಕೆಯನ್ನೂ ತರಲಿ ಎಂದು ವಿನಂತಿಸಿದರು. ಆಫ್ ಲೈನ್ ಕನ್ನಡ ಕಲಿಕೆಗೂ ತಾವು ಸಿದ್ಧರಿದ್ದು, ಎಲ್ಲ ಮಸೀದಿ, ಮದ್ರಸಾಗಳಲ್ಲಿ ಕನ್ನಡ ಕಲಿಸುವ ನಿಟ್ಟಿನಲ್ಲಿ ತಾವೇ ಮುಂದೆ ನಿಂತು ವ್ಯವಸ್ಥೆ ಕಲ್ಪಿಸಿಕೊಡುವುದಾಗಿ ಮೌಲಾನ ಘೋಷಿಸಿದರು. ಅಖಿಲ ಕರ್ನಾಟಕ ಮಹಮದೀಯರ ಕನ್ನಡ ವೇದಿಕೆ ರಾಜ್ಯಾಧ್ಯಕ್ಷ ಸಮೀವುಲ್ಲಾ ಖಾನ್ ಈ ಸಂದರ್ಭದಲ್ಲಿ ಕನ್ನಡದ ಸೇನಾನಿ ಹುತಾತ್ಮ ರಂಜಾನ್ ಸಾಬ್ ಹೆಸರಲ್ಲಿ ಸರಕಾರವೇ ಪ್ರಶಸ್ತಿ ಘೋಷಿಸಬೇಕು. ನಾಡಿಗಾಗಿ ದುಡಿಯುವ ಹೋರಾಟಗಾರರನ್ನು, ಬರಹಗಾರರನ್ನು ಗುರುತಿಸಿ ಈ ಪ್ರಶಸ್ತಿ ಕೊಡಬೇಕು. ಇದನ್ನು ದೊಡ್ಡ ಪ್ರಶಸ್ತಿಯಾಗಿ ಪ್ರಕಟಿಸಿ, ನೆಲಜಲಕ್ಕೆ ಕೊಡುಗೆ ನೀಡಿದ ಅಲ್ಪಸಂಖ್ಯಾತರನ್ನು ಗೌರವಿಸಬೇಕು ಎಂದು ಮನವಿ ಮಾಡಿದರು. ಮೌಲಾನಾ ಮತ್ತು ಸಮೀವುಲ್ಲಾ ಖಾನ್ ಅವರ ಮನವಿಯನ್ನು ಸರಕಾರದ ಮಟ್ಟದಲ್ಲಿ ಚರ್ಚಿಸಿ, ಇದನ್ನು ಜಾರಿಗೆ ತರುವ ನಿಟ್ಟಿನಲ್ಲಿ ಒತ್ತಡ ಹೇರುವುದಾಗಿ ನಾರಾಯಣಗೌಡ ಭರವಸೆ ಕೊಟ್ಟರು. ಮಸೀದಿಗಳ ಪ್ರವಚನಗಳಲ್ಲಿ, ಮದ್ರಸಾಗಳಲ್ಲಿ , ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡ ಪರ ವಾತಾವರಣವನ್ನು ನಿರ್ಮಿಸುವ ನಿಟ್ಟಿನಲ್ಲಿ ವ್ಯಕ್ತಿಗತವಾಗಿ ಖುದ್ದು ಆಸಕ್ತಿಯನ್ನು ಧರ್ಮಗುರುಗಳು ಪ್ರಕಟಿಸಿದ್ದು ಇಂದಿನ ಮತ್ತೊಂದು ವಿಶೇಷ. ಹಿರಿಯ ಪತ್ರಕರ್ತ ಬೆಲಗೂರು ಸಮೀವುಲ್ಲಾ ಉಪಸ್ಥಿತರಿದ್ದು, ಕರ್ನಾಟಕದ ಸೌಹಾರ್ದ ಪರಂಪರೆಯನ್ನು ನೆನಪಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಘಟಕದ ಅಧ್ಯಕ್ಷ ಟಿ.ಎ.ಧರ್ಮರಾಜ್ ಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ಹಯಾತ್ ಕಾರ್ಗಲ್, ರಾಜ್ಯ ಪ್ರಧಾನ ಸಂಚಾಲಕ ಮೋಹನ್ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಸೇರಿದಂತೆ ಪ್ರಮುಖ ನಾಯಕರು ಹಾಜರಿದ್ದರು. #JamiaMasjid #witnesses #unique #proKannada #phenomenon #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಬಿಜೆಪಿ ವಾಷಿಂಗ್ ಮಿಷಿನ್ ನಲ್ಲಿ ಭ್ರಷ್ಟಾಚಾರಿಗಳು ಸ್ವಚ್ಛಗೊಳ್ಳುತ್ತಾರೆ: ಸಂತೋಷ್ ಲಾಡ್ ವೀರೇಂದ್ರ ಪಪ್ಪಿ ಅವರನ್ನು ಬಿಜೆಪಿ ತನ್ನತ್ತ ಸೆಡೆಯಲು ಪ್ರಯತ್ನ ನಡೆಸಿದೆ ಬೆಂಗಳೂರು: ಅಕ್ರಮ ಬೆಟ್ಟಿಂಗ್‌ ದಂಧೆ ಹಾಗೂ ಆನ್ ಲೈನ್ ಗೇಮಿಂಗ್ ಸಂಬಂಧ ಬಂಧಿತರಾಗಿರುವ ಕಾಂಗ್ರೆಸ್‌ ಶಾಸಕ ಹಾಗೂ ಚಿತ್ರ ನಟ ದೊಡ್ಡಣ್ಣ ಅವರ ಅಳಿಯ ವೀರೇಂದ್ರ ಪಪ್ಪಿ ಅವರನ್ನು ಬಿಜೆಪಿ ತನ್ನತ್ತ ಸೆಡೆಯಲು ಪ್ರಯತ್ನ ನಡೆಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಯಾರನ್ನು ಯಾವಾಗ ಸೆಳೆಯುತ್ತಾರೆ ಎಂಬುದೇ ಗೊತ್ತಾಗುವುದಿಲ್ಲ. ಅವರಿಗೆ ಅವರದೇ ಆದಂತಹ ತಂತ್ರಗಾರಿಕೆ ಇದೆ. ಕಾಂಗ್ರೆಸ್‌‍ನ ಶಾಸಕ ವೀರೇಂದ್ರ ಪಪ್ಪಿ ವಿರುದ್ಧವೂ ಅಂತಹ ಪ್ರಯತ್ನ ನಡೆದಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌‍ನ ಶಾಸಕ ವೀರೇಂದ್ರ ಪಪ್ಪಿ ಅವರ ವಿರುದ್ಧ ಆರೋಪ ಮಾಡಿರುವುದು ರಾಜಕೀಯ ಕಾರಣಕ್ಕೆ. 40 ಕೆ.ಜಿ. ಚಿನ್ನ ಸಿಕ್ಕಿದೆ ಎಂದು ಹೇಳಲಾಗಿದೆ. ಈ ಹಿಂದೆ ಕಾಂಗ್ರೆಸ್‌‍ನಲ್ಲಿದ್ದ ಹಿಮಂತ್‌ ಬಿಸ್ವಾಶರ್ಮ ಅವರ ವಿರುದ್ಧ ಶಾರದಾ ಚಿಟ್‌ಫಂಡ್‌ ಹಗರಣ ಇತ್ತು. ಅದೇ ರೀತಿ ಮಹಾರಾಷ್ಟ್ರದಲ್ಲಿ ಅಜಿತ್‌ ಪವಾರ್‌ ವಿರುದ್ಧ ಸಾವಿರಾರು ಕೋಟಿ ರೂ.ಗಳ ಹಗರಣದ ಆರೋಪವಿತ್ತು. ಅವರನ್ನು ಬಿಜೆಪಿಗೆ ಸೇರಿಸಿಕೊಂಡರು ಈಗ ವಾಷಿಂಗ್‌ಪೌಡರ್‌ ನಿರ್ಮಾ ಹಾಕಿ ಸ್ವಚ್ಛಗೊಳಿಸಿದ್ದಾರೆಯೇ? ಎಂದು ಪ್ರಶ್ನಿಸಿದರು. ವೀರೇಂದ್ರ ಪಪ್ಪಿ ಬಿಹಾರ ವಿಧಾನಸಭೆಯ ಚುನಾವಣೆಗಾಗಿ ಕಾಂಗ್ರೆಸ್‌‍ ಪಕ್ಷಕ್ಕೆ ದುಡ್ಡು ಕೊಟ್ಟಿಲ್ಲ. ಒಂದು ವೇಳೆ ಯಾರಾದರೂ ಆ ರೀತಿ ದುಡ್ಡು ಕೊಟ್ಟಿದ್ದರೆ ಪತ್ತೆ ಹಚ್ಚುವ ವ್ಯವಸ್ಥೆಗಳು ಮತ್ತು ಸಾಮರ್ಥ್ಯ ಕೇಂದ್ರ ಸರ್ಕಾರದ ಬಳಿ ಇವೆ. ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಯ ಪೂರ್ಣ ಖರ್ಚನ್ನು ಅಜಿತ್‌ ಪವಾರ್‌ ನೋಡಿಕೊಂಡಿದ್ದರು ಎಂದರು. ಫೆಮಾ, ಇಡಿ ದಾಳಿ ಮಾಡಿಸಿ, ದುಡ್ಡು ಇರುವವರನ್ನು ಪತ್ತೆ ಹಚ್ಚಿ ಬಿಜೆಪಿಗೆ ಸೇರಿಸಿಕೊಳ್ಳುತ್ತಾರೆ. ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳೇ ಅಜಿತ್‌ ಪವಾರ್‌ ವಿರುದ್ಧ ಆರೋಪ ಮಾಡಿದ್ದವು. ಈಗ ಅಜಿತ್‌ ಪವಾರ್‌ ಆರೋಪಿ ಅಲ್ಲವೇ ಎಂದು ಪ್ರಶ್ನಿಸಿದರು. ಭ್ರಷ್ಟಚಾರದ ಆರೋಪ ಇರುವವರನ್ನು ಬಿಜೆಪಿಗೆ ಸೇರಿಸಿಕೊಂಡು ತಮ ಬಳಿಯಿರುವ ವಾಷಿಂಗ್‌ಮೆಷಿನ್‌ವೊಂದಕ್ಕೆ ಹಾಕುತ್ತಾರೆ. ಅಲ್ಲಿಗೆ ಅವರು ಪ್ರಾಮಾಣಿಕರಾಗಿ ಸ್ವಚ್ಛಗೊಳ್ಳುತ್ತಾರೆ. ಭ್ರಷ್ಟಚಾರಿಗಳಾಗಿ ಉಳಿಯುವುದಿಲ್ಲ. ಈ ರೀತಿ 25 ನಾಯಕರನ್ನು ಸ್ವಚ್ಛಗೊಳಿಸಲಾಗಿದೆ ಎಂದರು. ವಿಶ್ವದಲ್ಲಿ ಭಾರತ ಭ್ರಷ್ಟಚಾರ, ಆಭಿವ್ಯಕ್ತಿ ಸ್ವಾತಂತ್ರ್ಯ, ಹಸಿವಿನ ಸೂಚ್ಯಂಕ, ಪಾಸ್‌‍ಪೋರ್ಟ್‌ ರ್ಯಾಂಕಿಂಗ್‌ ಎಲ್ಲದರಲ್ಲೂ ಯಾವ ಸ್ಥಾನಮಾನದಲ್ಲಿದೆ ಎಂದು ಬಿಜೆಪಿಯವರು ಉತ್ತರ ನೀಡಬೇಕು ಎಂದು ಒತ್ತಾಯಿಸಿದರು. #Corrupt #people #get #cleaned #BJP #washingmachine #SantoshLad #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ನೋಂದಣಿ ಆರಂಭ ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನೆಹರು ಯುವ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ, ಕಾಲೇಜು ದಾವಣಗೆರೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಪ್ರಸಕ್ತ ಸಾಲಿನ ದಾವಣಗೆರೆ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 15ರಂದು ನಗರದ ದೃಶ್ಯ ಕಲಾ ಮಹಾವಿದ್ಯಾಲಯ ಆಯೋಜಿಸಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರಾದ ಹರ್ಷ ಹೇಳಿದ್ದಾರೆ. ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸುವ ಸ್ಪರ್ಧಾಳುಗಳು 15 ರಿಂದ 29 ವರ್ಷದೊಳಗಿನ ಯುವಕ, ಯುವತಿಯರು ಮಾತ್ರ ಭಾಗವಹಿಸಲು ಅವಕಾಶ ಇರುತ್ತದೆ. ದಾವಣಗೆರೆ ಜಿಲ್ಲೆಯ ಎಲ್ಲಾ ಯುವಕ, ಯುವತಿಯರು. ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಭಾಗವಹಿಸಬಹುದು. ಅಕ್ಟೋಬರ್ 14 ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿ ತಮ್ಮ ಆಧಾರ್ ಕಾರ್ಡ್ & ಜನನ ಪ್ರಮಾಣ ಪತ್ರದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಪಡೆದು ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಳ್ಳಬಹುದು ಅಥವಾ ಅ.15 ರಂದು ದೃಶ್ಯ ಕಲಾ ಮಹಾವಿದ್ಯಾಲಯ, ದಾವಣಗೆರೆ ಇಲ್ಲಿ ಬೆಳಿಗ್ಗೆ 9.00 ಗಂಟೆಯಿಂದ 10.30 ರ ಒಳಗಾಗಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಛೇರಿಗೆ ಸಂಪರ್ಕಿಸುವುದು. ದೂ.ಸಂ : 08192-237480 ಸಂಪರ್ಕಿಸಬಹುದು. #Registration #begins #districtlevel #youth #festival #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಡಿ.ಕೆ.ಶಿವಕುಮಾರ್ ಬೆಂಗಳೂರು: ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. ಲಾಲ್ ಬಾಗ್ ಉದ್ಯಾನದಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರೊಂದಿಗೆ ಸಂವಾದದ ಬಳಿಕ ಶಿವಕುಮಾರ್ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಸಾರ್ವಜನಿಕರ ಭೇಟಿಗೆ ಬಂದಾಗ ಕೆಲವರು ನೀವು ಮುಖ್ಯಮಂತ್ರಿ ಆಗಬೇಕು, ಆ ಸಮಯ ಹತ್ತಿರ ಬರುತ್ತಿದೆಯೇ ಎಂದು ಕೇಳಿದರು. ಆದರೆ ಸಿಎಂ ಆಗುವ ಕಾಲ ಹತ್ತಿರ ಬರುತ್ತಿದೆ ಎಂದು ನಾನೇ ಹೇಳಿದ್ದೇನೆ ಎಂದು ಕೆಲವು ಮಾಧ್ಯಮಗಳು ಸುದ್ದಿ ತಿದ್ದಿ ಪ್ರಸಾರ ಮಾಡುತ್ತಿವೆ. ನೀವು ಹಾಗೆಲ್ಲ ಸುದ್ದಿ ತಿರುಚಿ ತೋರಿಸಬೇಡಿ ಎಂದರು. ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ. ನಾನು ಇಲ್ಲಿಗೆ ಬಂದಿರುವುದು ಸಾರ್ವಜನಿಕರ ಸೇವೆ ಮಾಡಲು. ರಾಜಕಾರಣ ಮಾಡಲು ಅಲ್ಲ. ಜನರ ಸೇವೆ ಮಾಡಲು ಹಗಲು ರಾತ್ರಿ ತಿರುಗುತ್ತಿದ್ದೇನೆ. ನೀವು ಇದೇ ರೀತಿ ಸುದ್ದಿ ತಿರುಚುವುದಾದರೆ, ನಾನು ನಿಮಗೆ ಸಹಕಾರ ನೀಡುವುದಿಲ್ಲ. ಕಾರ್ಯಕ್ರಮಗಳಿಗೆ ಕರೆಯುವುದೂ ಇಲ್ಲ, ಮಾಧ್ಯಮಗೋಷ್ಠಿ ಕರೆಯುವುದೂ ಇಲ್ಲ ಎಂದರು. ನಾನು ಆ ಹೇಳಿಕೆ ಎಲ್ಲಿ ಹೇಳಿದ್ದೇನೆ. ಮಾಧ್ಯಮಗಳು ರಾಜಕಾರಣ ಮಾಡುವುದು ಬೇಡ. ನಾನು ಆ ರೀತಿ ಹೇಳಿಲ್ಲ, ಅದರ ಅಗತ್ಯವೂ ನನಗೆ ಇಲ್ಲ. ನನಗೆ ನನ್ನ ಗುರಿ ಗೊತ್ತಿದೆ. ಭಗವಂತ ನನಗೆ ಯಾವಾಗ ಅವಕಾಶ ಕೊಡುತ್ತಾನೋ ಕೊಡಲಿ. ರಾಜ್ಯದ ಜನರ ಸೇವೆ ಹಾಗೂ ಬೆಂಗಳೂರಿನ ನಾಗರೀಕರಿಗೆ ಉತ್ತಮ ಆಡಳಿತ ನೀಡಲು ಶ್ರಮಿಸುತ್ತಿದ್ದೇನೆ. ಆದರೆ ಒಳ್ಳೆಯ ಕೆಲಸ ಬಿಟ್ಟು ವಿವಾದ ಸೃಷ್ಟಿಸಲು ಕೆಲವು ಮಾಧ್ಯಮಗಳು ಪ್ರಯತ್ನಿಸುತ್ತಿವೆ ಎಂದರು. ಇದೇ ರೀತಿ ನನ್ನ ವಿಚಾರದಲ್ಲಿ ಸುಳ್ಳು ಸುದ್ದಿ ಹಾಕಿ, ದಾರಿ ತಪ್ಪಿಸುವ ಪ್ರಯತ್ನ ಮಾಡಿದರೆ ನಾನು ಮಾನನಷ್ಟ ಮೊಕದ್ದಮೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. #time #become #CM #near #DKShivakumar #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat