#🚨ತಿರುಪತಿ 'ಹುಂಡಿ'ಯಲ್ಲಿ 100 ಕೋಟಿ ರೂ ಗೂ ಅಧಿಕ ಹಣ ಕಳ್ಳತನ🚨 ಈ ಹಿಂದೆ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಆಡಳಿತಾವಧಿಯಲ್ಲಿ ತಿರುಪತಿ ದೇವಸ್ಥಾನದ ಪರಕಾಮಣಿ ದೇಣಿಗೆ ಪೆಟ್ಟಿಗೆಯಿಂದ ಬರೋಬ್ಬರಿ 100 ಕೋಟಿ ರೂ.ಗೂ ಹೆಚ್ಚು ಹಣ ಕಳವಾಗಿದೆ ಎಂಬ ಆರೋಪ ರಾಜಕೀಯ ತಿರುವು ಪಡೆದುಕೊಂಡಿದೆ. ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಸದಸ್ಯರೂ ಆಗಿರುವ ಭಾನು ಪ್ರಕಾಶ್ ರೆಡ್ಡಿ ಅವರು ದೇವಸ್ಥಾನದ ಸಿಬ್ಬಂದಿಯಾದ ರವಿಕುಮಾರ್ ದೇಣಿಗೆ ಪೆಟ್ಟಿಗೆಯಿಂದ ಹಣ ಕದ್ದಿದ್ದಾರೆ ಎಂದು ಆರೋಪಿಸಿ ಇದಕ್ಕೆ ಸಂಬಂಧಿಸಿ ಸಿಸಿಟಿವಿ ದೃಶ್ಯಗಳನ್ನು ಸಹ ಬಿಡುಗಡೆ ಮಾಡಿದ್ದಾರೆ.ದೇವಸ್ಥಾನ ಲೂಟಿ ಮಾಡಿದ ಕೋಟ್ಯಂತರ ರೂಪಾಯಿಗಳನ್ನು ಬಳಸಿಕೊಂಡು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಲಾಗಿದೆ ಹಾಗೂ ಈ ಅಕ್ರಮ ಹಣವನ್ನು ಜಗನ್ ಮೋಹನ್ ರೆಡ್ಡಿ ಅವರ ಮನೆಯಾದ ತಡೆಪಲ್ಲಿ ಅರಮನೆಗೆ ತಿರುಗಿಸಲಾಗಿದೆ ಎಂದು ಆರೋಪಿಸಲಾಗಿದೆ. 2019ರಿಂದ 2024ರವರೆಗೆ ನಡೆದ ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ಟಿಟಿಡಿಯ ಇತಿಹಾಸದಲ್ಲಿ 100 ಕೋಟಿ ರೂಪಾಯಿಗಳ ಕಳ್ಳತನವು ಅತಿ ದೊಡ್ಡ ಲೂಟಿ ಎಂದು ಭಾನು ಪ್ರಕಾಶ್ ರೆಡ್ಡಿ ದೂರಿದ್ದಾರೆ. #📰ಇಂದಿನ ಅಪ್ಡೇಟ್ಸ್ 📲 #🆕ಲೇಟೆಸ್ಟ್ ಅಪ್ಡೇಟ್ಸ್ 📰